ಕರ್ನಾಟಕ ನಾಟಕ ಅಕಾಡೆಮಿ ನಡೆದು ಬಂದ ದಾರಿ
ಸಾಂಸ್ಕೃತಿಕ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯಕ ಪರಂಪರೆಗಳನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರದ ಪಾತ್ರ ಗುರುತರವಾದುದು. ಕಲೆ ಸಂಸ್ಕೃತಿಗಳನ್ನು ಕಾಪಾಡಲು, ಪ್ರದರ್ಶನ ಕಲೆಗಳನ್ನು ಅಭಿವೃದ್ಧಿ ಪಡಿಸಲು ಸದಾ ಸಿದ್ಧರಾಗಿರುವ ರಾಜ್ಯ ಸರ್ಕಾರ ಪ್ರತಿಯೊಂದು ಕಲಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಚಿಂತನೆ ನಡೆಸಿ ರೂಪಿಸಿದ ಯೋಜನೆಯಲ್ಲಿ ಅಕಾಡೆಮಿಗಳ ಸ್ಥಾಪನೆಯು ಒಂದು.ಕರ್ನಾಟಕ ನಾಟಕ ಅಕಾಡೆಮಿಯ ಅಂದಿನ ಮೈಸೂರು ಸರ್ಕಾರದ ಆಡಳಿತದಡಿ 1955ರಲ್ಲಿ ಮೈಸೂರು ರಾಜ್ಯ ಸಂಗೀತ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ಥಾಪಿತವಾಯಿತು. ನಂತರ 1978ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ವತಂತ್ರ ಅಕಾಡೆಮಿಯಾಗಿ ರೂಪುಗೊಂಡು ನಾಟಕ ಕ್ಷೇತ್ರಕ್ಕೆ ವಿಶಿಷ್ಟ ಆಯಾಮ ನೀಡಿ, ರಂಗಭೂಮಿಯ ಸರ್ವತೋಮುಖ ಅಭಿವೃದ್ಧಿಗೆ ದುಡಿಯುತ್ತಿದೆ.