ಧ್ಯೇಯೋದ್ದೇಶಗಳು
ಅಕಾಡೆಮಿ ಧ್ಯೇಯೋದ್ದೇಶಗಳು
- ನಾಟಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವುದು.
- ಅಕಾಡೆಮಿಯ ನಾಟಕ ಬೆಳವಣಿಗೆಗಾಗಿ ಬೇರೆ ಕಡೆಗಳಲ್ಲಿರುವ ಇದೇ ರೀತಿಯ ಅಕಾಡೆಮಿಗಳೊಂದಿಗೆ ಮತ್ತು ಕರ್ನಾಟಕದಲ್ಲಿರುವ ಇತರ ಸಂಘ, ಸಂಸ್ಥೆಗಳೊಡನೆ ಸಹಕರಿಸುವುದು.
- ಅಕಾಡೆಮಿಯ ಕಾರ್ಯಚಟುವಟಿಕೆಗಳ ಉದ್ದೇಶಕ್ಕಾಗಿ ಮತ್ತು ದಾನಗಳ ಮೂಲಕ ವಂತಿಗೆ ದಾನಗಳ ಮೂಲಕ ನಿಧಿಗಳನ್ನು ಸಂಗ್ರಹಿಸುವುದು.
- ಗ್ರಂಥಾಲಯಗಳನ್ನು ಸ್ಥಾಪಿಸಿ, ರಂಗಭೂಮಿಗೆ ಸಂಬಂಧಿಸಿದ ಪುಸ್ತಕಗಳನ್ನು ಸಂಗ್ರಹಿಸುವುದು ಮತ್ತು ಪ್ರಕಟಿಸುವುದು.
- ನಾಟಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ಕಾರ್ಯಾಗಾರ, ಸಂವಾದ, ಉತ್ಸವಗಳನ್ನು ಏರ್ಪಡಿಸುವುದು.
- ವಿಚಾರ ಸಂಕಿರಣ, ಸಂವಾದ, ಉತ್ಸವಗಳನ್ನು ನೇರವಾಗಿ ಅಥವಾ ಸಂಘ, ಸಂಸ್ಥೆಗಳೊಂದಿಗೆ ಸಂಯುಕ್ತವಾಗಿ ಏರ್ಪಡಿಸುವುದು.
- ನಾಟಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುವುದು.
- ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಕೇಂದ್ರ ಅಕಾಡೆಮಿಗಳು ಅಪೇಕ್ಷಿಸಿದಾಗ ಸೂಕ್ತ ಸಲಹೆ ನೀಡುವುದು.